ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಐತಿಹಾಸಿಕ ಪ್ರಸಿದ್ದ ಪಡೆದಿರುವ ಕೋಟೆನಾಡು ಚಿತ್ರದುರ್ಗ ಮೂಲಭೂತ ಸೌಕರ್ಯಗಳಿಂದ ವಂಚಿತಾಗಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಚಿತ್ರದುರ್ಗ ನಾಗರೀಕರ ಹಿತರಕ್ಷಣಾ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಭಾರಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ನಗರದ ಹೊರಭಾಗದಲ್ಲಿ ಸುಸಜ್ಜಿತವಾದ ಹೈಟೆಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನಿರ್ಮಾಣವಾಗಬೇಕು.
ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ರಸ್ತೆ ಅಗಲೀಕರಣಗೊಳಿಸಿ ವಿಶಾಲವಾದ ಫುಟ್ಪಾತ್ ಆಗಬೇಕು. ಚಿತ್ರದುರ್ಗದ ಕೋಟೆ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿರುವುದರಿಂದ ಸರಿಯಾದ ರಸ್ತೆಗಳಿಲ್ಲದ ಕಾರಣ ಹಿಡಿ ಶಾಪ ಹಾಕುತ್ತಿದ್ದಾರೆ.
ಕೋಟೆಗೆ ಹೋಗುವ ವಾಹನಗಳ ಸಂಚಾರಕ್ಕೆ ದ್ವಿಪಥ ರಸ್ತೆಯಾಗಬೇಕು. ನಗರದಲ್ಲಿ ಸಾರಿಗೆ ಬಸ್ಗಳ ಸಂಚಾರ ಆರಂಭವಾಗಲಿ. ಬಿಡಿ. ರಸ್ತೆಯಲ್ಲಿ ಡಿವೈಡರ್ಗಳಿರುವುದರಿಂದ ಪಾದಚಾರಿಗಳು ರಸ್ತೆ ದಾಟಲು ಆಗುತ್ತಿಲ್ಲ. ಅದಕ್ಕಾಗಿ ಸ್ಕೈವಾಕರ್ಗಳ ನಿರ್ಮಾಣವಾಗಬೇಕು. ಜೋಗಿಮಟ್ಟಿ ಮತ್ತು ಕೆಳಗೋಟೆ ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸಿ ಸಿಟಿ ಬಸ್ಗಳ ಸಂಚಾರಕ್ಕೆ ಅನುಕೂಲವಾಗುವಂತೆ ಚಿಕ್ಕ ಡಿವೈಡರ್ಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಚಿತ್ರದುರ್ಗ ನಾಗರೀಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಅನಿಲ್ಕುಮಾರ್ ಡಿ.ಎಸ್, ಚಂದ್ರಶೇಖರ್ ಪಾಟೀಲ್, ತಿಪ್ಪಣ್ಣಗರಡಿ, ಸುನೀಲ್, ಕಣುಮೇಶ್, ಮಹಮದ್ ಹನೀಫ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

