ಪಿಯುಸಿ ಶಿಕ್ಷಣದೊಂದಿಗೆ ವೃತ್ತಿಪರ ಪ್ರವೇಶ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಪಿಯುಸಿ ಶಿಕ್ಷಣದೊಂದಿಗೆ ನೀಟ್
, ಐಐಟಿ-ಜೆಇಇ, ಕೆ-ಸೆಟ್, ಐಸಿಎಆರ್, ಸಿಯುಇಟಿ, ಸಿಎಲ್‍ಎಟಿ, ಸಿಎ-ಫೌಂಡೇಷನ್ ಪ್ರವೇಶ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್ https://gokdom.karnataka.gov.in  ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";