ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರ ಉಸ್ತುವಾರಿಗೆ ರಚಿಸಲಾಗಿರುವ ‘ಗ್ಯಾರಂಟಿ ಅನುಷ್ಠಾನ ಸಮಿತಿ‘ ಈಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಈ ಸಮಿತಿಯು ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡುವ “ಸಾಂಸ್ಥಿಕ ಭ್ರಷ್ಟಾಚಾರದ ಕೇಂದ್ರ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಸದನಕ್ಕೆ ಸರ್ಕಾರ ನೀಡಿರುವ ಅಧಿಕೃತ ದಾಖಲೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಸಮಿತಿಯ ಪದಾಧಿಕಾರಿಗಳ ವೇತನ ಮತ್ತು ಸೌಲಭ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಅಶೋಕ್ ಬಿಡುಗಡೆ ಮಾಡಿದ ‘ಲಕ್ಷಾಧಿಪತಿ‘ ಪಟ್ಟಿ:
ಸಮಿತಿಯ ನಿರ್ವಹಣೆಗಾಗಿ ಪ್ರತಿ ತಿಂಗಳು ಸರಿಸುಮಾರು 55.33 ಲಕ್ಷ ವ್ಯಯಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

