‘ಮ್ಯಾರಿಯೆಟ್ ತಾರಾ’ ಹೋಟೆಲ್ ಲೋಕಾರ್ಪಣೆಗೊಳಿಸಿದ ಹೆಚ್.ಡಿ. ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ತಿರುಪತಿ:
ಆಂಧ್ರಪ್ರದೇಶದ ಪವಿತ್ರ ಕ್ಷೇತ್ರವಾದ ತಿರುಪತಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರತಿಷ್ಠಿತ ಮ್ಯಾರಿಯೆಟ್ ತಾರಾಹೋಟೆಲ್ ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಭ್ರಮದಿಂದ ಲೋಕಾರ್ಪಣೆಗೊಳಿಸಿದರು.

​ಹೋಟೆಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವವಿಖ್ಯಾತ ಧಾರ್ಮಿಕ ಕೇಂದ್ರವಾದ ತಿರುಪತಿಗೆ ಬರುವ ಭಕ್ತಾದಿಗಳಿಗೆ ಮತ್ತು ಪ್ರವಾಸಿಗರಿಗೆ ಈ ನೂತನ ಹೋಟೆಲ್ ಅತ್ಯುತ್ತಮ ಸೇವೆ ನೀಡಲಿ ಎಂದು ಆಶಿಸಿ, ಸಂಸ್ಥೆಯ ಯಶಸ್ಸಿಗೆ ಶುಭ ಕೋರಿದರು.

- Advertisement - 

​ಸಮಾರಂಭದ ಪ್ರಮುಖ ಗಣ್ಯರು:
​ಈ ಅದ್ಧೂರಿ ಉದ್ಘಾಟನಾ ಸಮಾರಂಭಕ್ಕೆ ರಾಜಕೀಯ ವಲಯದ ಪ್ರಮುಖ ನಾಯಕರು ಸಾಕ್ಷಿಯಾಗಿದ್ದರು.
​ಜೆಡಿಎಸ್ ಹಿರಿಯ ನಾಯಕರು ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಯುವ ಮುಖಂಡ ಶಿರೀಶ್ ಕುಪೇಂದ್ರ ರೆಡ್ಡಿ,

​ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಹಲವು ಮುಖಂಡರು ಹಾಗೂ ಗಣ್ಯರು ಪಾಲ್ಗೊಂಡು ನೂತನ ಹೋಟೆಲ್ ಮಾಲೀಕರಿಗೆ ಶುಭ ಹಾರೈಸಿದರು. ಆಧುನಿಕ ಸೌಲಭ್ಯಗಳೊಂದಿಗೆ ತಲೆಯೆತ್ತಿರುವ ಈ ಹೋಟೆಲ್ ತಿರುಪತಿಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ಮೆರುಗು ನೀಡಲಿದೆ ಎಂದು ಭಾವಿಸಲಾಗಿದೆ.

- Advertisement - 

 

 

Share This Article
error: Content is protected !!
";