ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26 ರ ಆರ್ಥಿಕ ವರ್ಷದ ಮುಕ್ತಾಯದ ಹಿನ್ನೆಲೆಯಲ್ಲಿ, ತೆರಿಗೆದಾರರ ಅನುಕೂಲಕ್ಕಾಗಿ ಮಾರ್ಚ್ 30 ರಂದು ಮಹಾವೀರ ಜಯಂತಿ ಪ್ರಯುಕ್ತ ಸಾರ್ವತ್ರಿಕ ರಜೆ ಇದ್ದರೂ ಸಹ ವಾಣಿಜ್ಯ ತೆರಿಗೆ ಇಲಾಖೆಯ ಎಲ್ಲಾ ಕಚೇರಿಗಳು ಅಂದು ಕಾರ್ಯನಿರ್ವಹಿಸಲಿವೆ.
ತೆರಿಗೆದಾರರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಬಾಕಿ ಇರುವ ತೆರಿಗೆ ಪಾವತಿ ಹಾಗೂ ಇತರೆ ಇಲಾಖಾ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳಬಹುದು ಎಂದು ವಾಣಿಜ್ಯ ತೆರಿಗೆಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

