ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭೆ ಉಪಚುನಾವಣೆ ಅಂಗವಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪ್ರಚಾರ ಮಾಡಲಾಗುತ್ತದೆ ಎಂದು ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ. ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿದ್ದು, ಕುಮಾರಸ್ವಾಮಿ ಅವರು ಪ್ರಚಾರಕ್ಕಾಗಿ ಸಮಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಜಯೇಂದ್ರ ದೃಢಪಡಿಸಿದ್ದಾರೆ.

- Advertisement - 

ಇದರಿಂದಾಗಿ ಉಪಚುನಾವಣೆಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ನಾಯಕರ ಬೆಂಬಲ ಮತ್ತು ಸಹಭಾಗಿತ್ವ ಖಚಿತವಾಗಿದೆ.

 

- Advertisement - 

Share This Article
error: Content is protected !!
";