ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಉತ್ತರ ಜಿಲ್ಲೆಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಬೃಹತ್ ‘ಜನತಾ ಸಮಾವೇಶ‘ದ ನಿಮಿತ್ತ ಪೂರ್ವಸಿದ್ಧತಾ ಸಭೆಯನ್ನು ಆಯೋಜಿಸಲಾಗಿತ್ತು. ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ನಡೆಯಿತು.
ಸಭೆಯ ಪ್ರಮುಖ ಉದ್ದೇಶ:
ಏಪ್ರಿಲ್ 11ರಂದು ಕೊಮ್ಮಘಟ್ಟದ ನೈಸ್ ಗ್ರೌಂಡ್‌ನಲ್ಲಿ ಹಮ್ಮಿಕೊಳ್ಳಲಾಗಿರುವ *‘ಜನತಾ ಸಮಾವೇಶ‘*ವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ಹಂಚುವುದು ಹಾಗೂ ಕಾರ್ಯತಂತ್ರ ರೂಪಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು.
ಸಭೆಯಲ್ಲಿ ಜಿಲ್ಲೆ ಹಾಗೂ ಕ್ಷೇತ್ರದ ಪ್ರಮುಖ ನಾಯಕರು ಉಪಸ್ಥಿತರಿದ್ದು ಸಮಾವೇಶದ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಮಾಜಿ ಶಾಸಕರು ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಇ. ಕೃಷ್ಣಪ್ಪ, ದಾಸರಹಳ್ಳಿ ಕ್ಷೇತ್ರದ ಅಧ್ಯಕ್ಷ ಎಂ. ಮುನಿಸ್ವಾಮಿ, ಹಿರಿಯ ಮುಖಂಡ ಎಂ. ಮುನೇಗೌಡ, ಗ್ರೇಟರ್ ಬೆಂಗಳೂರು ಮಹಿಳಾ ಅಧ್ಯಕ್ಷೆ ಶ್ರೀಮತಿ ಶೈಲಾ ಸಂತೋಜಿ ರಾವ್, ಯಲಹಂಕ ಕ್ಷೇತ್ರದ ಅಧ್ಯಕ್ಷ ಎ.ವಿ. ವೇಣುಗೋಪಾಲ್, ಬೆಂಗಳೂರು ಉತ್ತರ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಜಿ. ಜಯಣ್ಣ, ಜಿಲ್ಲಾ ಮಹಿಳಾ ಅಧ್ಯಕ್ಷೆ ಶ್ರೀಮತಿ ಕವಿತಾ ರೆಡ್ಡಿ.
ಕ್ಷೇತ್ರದ ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಿ (ಛಾಯಾ), ವಾರ್ಡ್ ಅಧ್ಯಕ್ಷ ಬಲರಾಮ್, ಶ್ರೀವಾಸು, ಮುಖಂಡರುಗಳಾದ ಲಕ್ಕಣ್ಣ, ಗಿರಿಜಾ, ಅಶ್ವಿನಿ ಬಲರಾಮ್ ಸೇರಿದಂತೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡು ಸಮಾವೇಶಕ್ಕೆ ಬೆಂಬಲ ವ್ಯಕ್ತಪಡಿಸಿದರು.
”ಕ್ಷೇತ್ರದ ಪ್ರತಿಯೊಂದು ವಾರ್ಡ್‌ನಿಂದಲೂ ಜನಸಾಗರ ಹರಿದು ಬರಲಿದ್ದು, ಏಪ್ರಿಲ್ 11ರ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ದಿಕ್ಸೂಚಿಯಾಗಲಿದೆ” ಎಂದು ಸಭೆಯಲ್ಲಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.

