ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮತ್ತು ಮಾನವೀಯತೆ ಮುಖ್ಯ: ಸಿಎಂ ಸಿದ್ದರಾಮಯ್ಯ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಮೈಸೂರು:
“ಪೊಲೀಸ್ ಸೇವೆಯಲ್ಲಿ ಶಿಸ್ತು
, ಸಂಯಮ, ಪ್ರಾಮಾಣಿಕತೆ ಮತ್ತು ಮಾನವೀಯತೆ ಅತ್ಯಂತ ಮುಖ್ಯ. ಸಮಾಜದ ದೀನದಲಿತರು, ಅಶಕ್ತರು ಮತ್ತು ಮಹಿಳೆಯರ ರಕ್ಷಣೆ ಮಾಡುವುದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

​ಮೈಸೂರಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

- Advertisement - 

​​ಮಹಿಳೆಯರ ಸುರಕ್ಷತೆ ಮತ್ತು ಸ್ವಾತಂತ್ರ್ಯ:
ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಂತೆ ಎಂಬ ಮಹಾತ್ಮ ಗಾಂಧೀಜಿಯವರ ಮಾತನ್ನು ಸ್ಮರಿಸಿದ ಸಿಎಂ
, ಮಹಿಳೆಯರ ರಕ್ಷಣೆಗೆ ಪೊಲೀಸರು ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.

​ಖಾಲಿ ಹುದ್ದೆಗಳ ಭರ್ತಿ: ಕಳೆದ ಮೂರು ವರ್ಷಗಳಲ್ಲಿ 4,911 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಶೀಘ್ರದಲ್ಲೇ ಉಳಿದ 8,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

- Advertisement - 

​ಮಾದಕ ವಸ್ತು ಮುಕ್ತ ಸಮಾಜ:
ಯುವ ಜನಾಂಗವನ್ನು ಹಾಳು ಮಾಡುತ್ತಿರುವ ಮಾದಕ ವಸ್ತುಗಳ ತಯಾರಿಕೆ ಮತ್ತು ಮಾರಾಟ ಜಾಲವನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸರ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು.

​ತಂತ್ರಜ್ಞಾನದ ಬಳಕೆ:
ಸೈಬರ್ ಅಪರಾಧಗಳನ್ನು ತಡೆಯಲು ಪೊಲೀಸರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.

​ಅಮಿಷಗಳಿಗೆ ಒಳಗಾಗಬೇಡಿ:
“ಶ್ರೀಮಂತರು ಹಣಬಲದಿಂದ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಬಹುದು. ಆದರೆ ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ
, ಧೈರ್ಯದಿಂದ ನ್ಯಾಯವನ್ನು ಎತ್ತಿಹಿಡಿಯಬೇಕು,” ಎಂದು ಎಚ್ಚರಿಸಿದರು.

​ಮುಖ್ಯಮಂತ್ರಿಗಳ ಕಿವಿಮಾತು:
“ಅಪರಾಧಿಗಳ ವಿಷಯದಲ್ಲಿ ಕರುಣೆ ಬೇಡ
, ಆದರೆ ನಿರಪರಾಧಿಗಳ ವಿಷಯದಲ್ಲಿ ಮಾನವೀಯತೆ ಇರಲಿ. ಪೊಲೀಸರು ಸರ್ಕಾರದ ಪ್ರತಿನಿಧಿಗಳಾಗಿ ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ರಕ್ಷಕರಾಗಿ ಕೆಲಸ ಮಾಡಬೇಕು.”

 

 

 

Share This Article
error: Content is protected !!
";