ಕೇಂದ್ರದ ವೈಫಲ್ಯದಿಂದ ‘ಉಜ್ವಲ’ ಯೋಜನೆ ಈಗ ‘ಸೌದೆ’ ಭಾಗ್ಯವಾಗಿದೆ: ಡಿ.ಕೆ ಶಿವಕುಮಾರ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುದ್ಧಗಳ ನೆಪವೊಡ್ಡಿ ಕೇಂದ್ರ ಸರ್ಕಾರವು ದೇಶದ ಬೆಲೆ ಏರಿಕೆ ಸಮಸ್ಯೆಯನ್ನು ಕಡೆಗಣಿಸುತ್ತಿದೆ. ಕೇಂದ್ರದ ತಪ್ಪು ವಿದೇಶಾಂಗ ನೀತಿಗಳಿಂದಾಗಿ ಬಡವರ ಬದುಕು ದುಸ್ತರವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಕಟುವಾಗಿ ಟೀಕಿಸಿದರು.

- Advertisement - 

​​ಸೌದೆ ಭಾಗ್ಯ: “ಕೇಂದ್ರದ ಉಜ್ವಲಯೋಜನೆ ವಿಫಲವಾಗಿದ್ದು, ದೇಶದಲ್ಲಿ ಮತ್ತೆ ಸೌದೆಯುಗ ಆರಂಭವಾಗಿದೆ. ಅಡುಗೆ ಅನಿಲದ ಸಮರ್ಪಕ ಪೂರೈಕೆ ಇಲ್ಲದೆ ಸಾಮಾನ್ಯ ಜನರು ಮತ್ತು ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಮೋದಿಯವರು ನಮಗೆ ಇಂದು ಸೌದೆ ಭಾಗ್ಯನೀಡಿದ್ದಾರೆ,” ಎಂದು ವ್ಯಂಗ್ಯವಾಡಿದರು.

​ಬೆಲೆ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಇಂದಿನಿಂದ ಟೋಲ್ ದರ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement - 

​ಔಷಧಿಗಳ ಬೆಲೆ ಹೆಚ್ಚಳ: ಸುಮಾರು 900ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಬದುಕನ್ನು ಕೇಂದ್ರ ಸರ್ಕಾರ ಮತ್ತಷ್ಟು ಕಷ್ಟಕ್ಕೆ ದೂಡಿದೆ ಎಂದು ದೂರಿದರು.

​ಜನರನ್ನೇ ಏಪ್ರಿಲ್ ಫೂಲ್ಮಾಡಿದ ಕೇಂದ್ರ: ಏಪ್ರಿಲ್ ಒಂದರಿಂದಲೇ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಏಪ್ರಿಲ್ ಫೂಲ್ಮಾಡಿದೆ. ಜನರ ಆರ್ಥಿಕ ಸವಾಲುಗಳನ್ನು ನೀಗಿಸುವ ಬದಲು ಅವರಿಗೆ ಹೆಚ್ಚಿನ ಹೊರೆ ಹೊರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

​’ಅಚ್ಛೇ ದಿನ್ಎಲ್ಲಿವೆ?
​”
ಅಚ್ಛೇ ದಿನಗಳು ಬರುತ್ತವೆ ಎಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರೇ, ಈಗ ಆ ದಿನಗಳು ಎಲ್ಲಿವೆ? ಈಗ ಅಚ್ಛೇ ದಿನಗಳುಹೋಗಿ ಕಚ್ಚಾ ದಿನಗಳುಬಂದಿವೆ ಎಂದು ಹೇಳಬೇಕಿದೆ,” ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

 

 

 

Share This Article
error: Content is protected !!
";