ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು 2026 ನೇ ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಏಪ್ರಿಲ್ 5 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ರ್ಈ ಸಲ್ಲಿಸುವ ಅವಧಿ ವಿಸ್ತರಿಸಿದ್ದು, ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ನಿರ್ದೇಶಕರಾದ ಪ್ಲೈಟ್ ಲೆಫ್ಟಿನೆಂಟ್ ಎಂ.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

