ಬರಗೇರಿಯ ಅದ್ಧೂರಿ ಮೆರವಣಿಗೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ಶುಕ್ರವಾರ ನಗರದ ರಾಜಬೀದಿಗಳಲ್ಲಿ ಸಾಗಿತು. ಜೋಡೆತ್ತಿನ ಗಾಡಿಯಲ್ಲಿ ವಿರಾಜಮಾನಳಾಗಿದ್ದ ಬರಗೇರಮ್ಮನನ್ನು ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣ ದೊಡ್ಡ ಗಾತ್ರದ ಹೂವಿನ ಹಾರಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು.

ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತದ ಮೂಲಕ ಲಕ್ಷ್ಮಿಬಜಾರ್‌ನಿಂದ ಪ್ರಮುಖ ಬೀದಿಗಳಲ್ಲಿ ಹೊರಟ ಬರಗೇರಮ್ಮನಿಗೆ ರಸ್ತೆಯ ಬದಿಗಳಲ್ಲಿ ನಿಂತಿದ್ದ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು, ಡೊಳ್ಳು, ತಮಟೆ, ಚಂಡೆವಾದ್ಯ, ಗೊಂಬೆ ಕುಣಿತ, ಸೋಮನ ಕುಣಿತ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.

- Advertisement - 

 

- Advertisement - 
Share This Article
error: Content is protected !!
";