ಅಪರಿಚಿತ ವಾಹನ ಡಿಕ್ಕಿ ಚಿರತೆ ಸ್ಥಳದಲ್ಲೇ ಸಾವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-
50ರಲ್ಲಿ ನಡೆದಿದೆ.

ಮೃತ ಚಿರತೆಯನ್ನು ಸುಮಾರು 3 ವರ್ಷದ ಗಂಡು ಚಿರತೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ತಿಮ್ಮಲಾಪುರ ಗ್ರಾಮದ ಬಳಿಯ ಟೋಲ್ ಪ್ಲಾಜಾ ಸಮೀಪ, ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

- Advertisement - 

ಈ ಘಟನೆ ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಗಸ್ತಿಗೆ ತೆರಳಿದ್ದ ವೇಳೆ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ. ಭಾಸ್ಕರ್ ಹಾಗೂ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

- Advertisement - 

ಈ ಸಂಬಂಧ ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ವನ್ಯಜೀವಿ ಅಪರಾಧ ಪ್ರಕರಣ ದಾಖಲು ಮಾಡಲಾಗಿದೆ. ಚಿರತೆಯ ಸಾವಿಗೆ ನಿಖರ ಕಾರಣ ತಿಳಿದುಕೊಳ್ಳಲು ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಪಡೆಯಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಮೃತ ಚಿರತೆಯನ್ನು ಕಾನೂನು ಪ್ರಕಾರ ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗಿದೆ. ಘಟನೆ ಹಿನ್ನೆಲೆ ವನ್ಯಜೀವಿಗಳ ಸಂಚಾರ ಇರುವ ಪ್ರದೇಶಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಅಪರಿಚಿತ ವಾಹನ ಡಿಕ್ಕಿಗೆ ಚಿರತೆ ಬಲಿ: ತಿಮ್ಮಲಾಪುರ ಟೋಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಘಟನೆ.

 

Share This Article
error: Content is protected !!
";