ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರತಿಯೊಬ್ಬ ಯುವಕ-ಯುವತಿಯರು ಸ್ವಾಮಿ ವಿವೇಕಾನಂದರು ಕೊಲಂಬೊ ಇಂದ ಆಲ್ಮೋರದವರೆಗೆ ಮಾಡಿದ ಉಪನ್ಯಾಸಗಳನ್ನು ಒಳಗೊಂಡ ಪುಸ್ತಕವನ್ನು ತಪದೇ ಓದಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಅಭಿಷೇಕ್ ಚಕ್ರವರ್ತಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಾರದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಹಿಂದೂ ಸನಾತನ ಪರಂಪರೆ ಮತ್ತು ಭಾರತದ ಜೀವಾಳ ಆಧ್ಯಾತ್ಮಿಕತೆ” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ದಿವ್ಯತ್ರಯರಿಗೆ ಮಂಗಳಾರತಿ ನಡೆಸಿಕೊಟ್ಟರು.
ತರಗತಿಯಲ್ಲಿ ಈಶ್ವರಮ್ಮ, ಅಶ್ವಿನಿ ರಾಕೇಶ್, ಚೇತನ್, ಲೋಹಿತ್ ಕುಮಾರ್, ಜ್ಞಾನೇಶ್ವರಿ, ತಪಸ್ವಿನಿ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

