ಹಿರಿಯೂರಿನಲ್ಲಿ ಡಿಸಿಎಂ ಶಿವಕುಮಾರ್ ಅವರಿಗೆ ಅದ್ಧೂರಿ ಸ್ವಾಗತ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಹಿರಿಯೂರು ನಗರಕ್ಕೆ ಭೇಟಿ ನೀಡಿದ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿ
, ಸನ್ಮಾನಿಸಿದರು.

​ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ ಹೆಮ್ಮೆಯ ಜನನಾಯಕ ಎಂದು ಬಣ್ಣಿಸಿದ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯೂರಿನಲ್ಲಿ ಅದ್ಧೂರಿ ಅಭಿನಂದನೆ ಸಲ್ಲಿಸಲಾಯಿತು.

- Advertisement - 

​​ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭಕೋರಿದ ಪ್ರಮುಖರಾದ ಕೆಪಿಸಿಸಿ ಸದಸ್ಯ ಅಮ್ಮತೇಶ್ವರ ಸ್ವಾಮಿ, ಮುನ್ನ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ​ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೆ ಗೌಡ, ಕೃಷಿಕ ಸಮಾಜದ ಅಧ್ಯಕ್ಷ ಚಿಗಳಿಕಟ್ಟೆ ಕಾಂತರಾಜ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಈ. ಮಂಜುನಾಥ್, ಪಾತಲಿಂಗಪ್ಪ, ಚಂದ್ರಶೇಖರ್, ಮಮತ, ಶಿವರಂಜಿನಿ, ಬಾಲಕೃಷ್ಣ ಆಚಾರ್ಯ ಹಾಗೂ ಪಕ್ಷದ ವಿವಿಧ ಸ್ತರದ ನಾಯಕರು ಭಾಗವಹಿಸಿದ್ದರು.

- Advertisement - 

​ಒಗ್ಗಟ್ಟಿನ ಪ್ರದರ್ಶನ:
​ನಗರಸಭೆಯ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು
, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

​ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರ ಭೇಟಿಯು ಸ್ಥಳೀಯ ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.

 

 

Share This Article
error: Content is protected !!
";