ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.
ಬೆಂಗಳೂರಿನ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಕುಶಲೋಪರಿ ವಿಚಾರಿಸಿ ಮಾರ್ಗದರ್ಶನ ಪಡೆದರು. ಭೇಟಿಯ ಸಮಯದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಇತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಸಮಾಜದ ಅಭಿವೃದ್ಧಿ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಶ್ರೀಗಳೊಂದಿಗೆ ಅವರು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಮಠದ ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ಕುಮಾರಸ್ವಾಮಿ ಅವರು ‘ಜೈ ಗುರುದೇವ್‘ ಎಂದು ಭಕ್ತಿಪೂರ್ವಕವಾಗಿ ಸ್ಮರಿಸಿದ್ದಾರೆ.

