ರೈಲ್ವೆ ಮಾರ್ಗ ಪರಿಶೀಲನೆ: ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಸಂಸದ ಯದುವೀರ್‌ಅವರಿಂದ ತಪಾಸಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಡ್ಯ ನಡುವಿನ ರೈಲ್ವೆ ಮಾರ್ಗದ ಕಾರ್ಯಾಚರಣೆ ಹಾಗೂ ಮೂಲಸೌಕರ್ಯಗಳ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

​ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ನಡೆಸಿದ ಈ ವಿಂಡೋ ಟ್ರೈಲಿಂಗ್ತಪಾಸಣೆಯ ಅವಧಿಯಲ್ಲಿ, ರೈಲ್ವೆ ಹಳಿಗಳ ಸ್ಥಿತಿಗತಿ, ಸಿಗ್ನಲಿಂಗ್ ವ್ಯವಸ್ಥೆ ಮತ್ತು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಲಾಯಿತು.

- Advertisement - 

​​ಕಾರ್ಯಾಚರಣೆ ಪರಿಶೀಲನೆ: ರೈಲುಗಳ ಸಂಚಾರದ ವೇಗ ಮತ್ತು ಸಮಯದ ಪಾಲನೆಯ ಬಗ್ಗೆ ಸಚಿವರು ಮಾಹಿತಿ ಪಡೆದರು.​ಮೂಲಸೌಕರ್ಯ ಸಿದ್ಧತೆ: ಈ ಭಾಗದಲ್ಲಿ ರೈಲ್ವೆ ಹಳಿಗಳ ಉನ್ನತೀಕರಣ ಮತ್ತು ನಿಲ್ದಾಣಗಳಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

​ಸಂಸದರ ಉಪಸ್ಥಿತಿ: ಈ ಸಂದರ್ಭದಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಮೈಸೂರು ಮತ್ತು ಮಂಡ್ಯ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದರು.

- Advertisement - 

​ಬೆಂಗಳೂರು-ಮಂಡ್ಯ ಮಾರ್ಗವು ಅತಿ ಹೆಚ್ಚು ಜನದಟ್ಟಣೆಯಿರುವ ಮಾರ್ಗಗಳಲ್ಲಿ ಒಂದಾಗಿದ್ದು, ಈ ತಪಾಸಣೆಯು ಮುಂದಿನ ದಿನಗಳಲ್ಲಿ ರೈಲ್ವೆ ಸೇವೆಯ ಗುಣಮಟ್ಟವನ್ನು ಸುಧಾರಿಸಲು ಮತ್ತು ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

 

 

 

 

Share This Article
error: Content is protected !!
";