ಚಂದ್ರವಳ್ಳಿ ನ್ಯೂಸ್, ಬೀದರ್:
ಬೀದರ್ನಲ್ಲಿ ನಡೆಯುವ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಾದರಿ ಆಗಿಸುವ ದಿಸೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರು ಸಂಘವು ಜಿಲ್ಲೆಯ ಎಲ್ಲ ಪತ್ರಕರ್ತರ ಜತಗೂಡಿ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ತಿಳಿಸಿದರು.
ರಾಜ್ಯದ ವಿವಿಧೆಡೆಯಿಂದ ಬರುವ ಪತ್ರಕರ್ತರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ನೋಂದಣಿ ಸೇರಿ 22 ಮಳಿಗೆಗಳು ಇರಲಿವೆ ಎಂದು ಹೇಳಿದರು.

