ಚಂದ್ರವಳ್ಳಿ ನ್ಯೂಸ್, ಬೀದರ್:
ಜಿಲ್ಲೆಯ ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಶಾಸಕರಾದ ಪ್ರಭು ಚೌಹಾಣ್, ಶರಣು ಸಲ್ಗರ್, ಮುಖಂಡರಾದ ಸಿದ್ದು ಪಾಟೀಲ್, ಕಲ್ಬುರ್ಗಿ ವಿಭಾಗದ ಸಹಪ್ರಭಾರಿ ಶರಣಪ್ಪ ತಡವಾರ್, ಪ್ರಶಿಕ್ಷಣ ರಾಜ್ಯ ಸಂಚಾಲಕ ರಾಜಶೇಖರ್ ನಾಗಮೂರ್ತಿ, ಕಿರಣ್ ಪಾಟೀಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ್ ಹಾಸೂರೆ,ಶ್ರೀ ಮಂಡಲ ಅಧ್ಯಕ್ಷ ರಾಮ್ ಶೆಟ್ಟಿ ಪನ್ನಾಳೆ ಸೇರಿದಂತೆ ಮತ್ತಿತರರ ಮುಖಂಡರು ಪಾಲ್ಗೊಂಡಿದ್ದರು.
”ಪಕ್ಷದ ಸಿದ್ಧಾಂತ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯದ ಪರಿಕಲ್ಪನೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ದಿಕ್ಸೂಚಿಯಾಗಲಿವೆ,” ಎಂದು ಈ ವೇಳೆ ನಾಯಕರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರು ಪಾಲ್ಗೊಂಡು ತರಬೇತಿ ಪಡೆದರು. ಕಾರ್ಯಕ್ರಮವು ಪಕ್ಷದ ಶಿಸ್ತು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆಗಳಿಗೆ ಸಾಕ್ಷಿಯಾಯಿತು.

