ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2026-27 ನೇ ಸಾಲಿಗೆ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2500 ರೂ.ಗಳ ಕಲಾವಿದರ ಮಾಸಾಶನ ಮತು 500 ರೂ.ಗಳ ವಿಧವಾ ಮಾಸಾಶನ ಪಡೆಯುತ್ತಿರುವ ಸಾಹಿತಿಗಳು/ಕಲಾವಿದರುಗಳ ಜಿಲ್ಲಾ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಪಿಂಚಣಿ ಪಾವತಿ (P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್,
ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್.ಡಿ ಸಂಖ್ಯೆ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಏಪ್ರಿಲ್ 30 ರೊಳಗೆ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 ಚಪ್ಪರದಕಲ್ಲು, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

