ರಾಜಧಾನಿ ಬೆಂಗಳೂರಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಗಂಡನೇ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. 25 ವರ್ಷದ ನವ್ಯಾ ಕೊಲೆಯಾದ ಮಹಿಳೆ. ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ನವ್ಯಾ ಗಂಡ ಕಿರಣ್ ಈ ಕೃತ್ಯ ಎಸಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಳೆದ 3 ವರ್ಷದ ಹಿಂದೆ ನವ್ಯಾ ಹಾಗೂ ಕಿರಣ್ ಇಬ್ಬರು ಪ್ರೀತಿಸಿ ಮದುವೆ ಆಗಿದ್ದರು. ನವ್ಯಾ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದವರಾಗಿದ್ದು, ಸಿನಿಮಾ ರಂಗದಲ್ಲಿ ಕೊರಿಯೋಗ್ರಾಫರ್ ಆಗಿದ್ದರು.