Ad imageAd image

ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ) ಸೂರ್ಯಕಾಂತಿಯನ್ನು ಖರೀದಿಸಲು, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

 ಹಿರಿಯೂರು ತಾಲ್ಲೂಕಿನ ಯರಬಳ್ಳಿ/ಐಮಂಗಲ, ಧರ್ಮಪುರ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಹಾಗೂ ಹಿರಿಯೂರು ಎ.ಪಿ.ಎಂ.ಸಿ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ದೇವರೆಡ್ಡಿಹಳ್ಳಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಮತ್ತು ಚಳ್ಳಕೆರೆ ಎ.ಪಿ.ಎಂ.ಸಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮತಿ ಕಾರ್ಯದರ್ಶಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";