ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ -ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ.
ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ ಅಕಾಡೆಮಿಯ ಕಾರ್ಯಸೂಚಿಯನ್ವಯ ಅರ್ಹ-ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಕಾರ್ಯನಿರ್ವಹಿಸಲು ಬಯಸಿದ್ದಲ್ಲಿ ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಪೌಂಡ್ ಹತ್ತಿರ ಮಡಿಕೇರಿ ಇವರಿಗೆ ಪತ್ರ ಬರೆದು ಮಾಹಿತಿಯನ್ನು ಪಡೆದುಕೊಳ್ಳುವಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.