ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.
ಕೆ.ವಿ. ಪ್ರಭಾಕರ್ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ/ವಿತರಕರ ಸಂಘದ ಸಹಯೋಗದಲ್ಲಿ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯಲಿರುವ “ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ” ದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.