ಮುಖ್ಯಮಂತ್ರಿಗಳಿಂದ ಜನಸ್ಪಂದನ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು : 
ಮಾನ್ಯ ಮುಖ್ಯಮಂತ್ರಿಯವರು 2024ನೇ ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಕಲಬುರಗಿ ವಿಭಾಗ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಮೊದಲ ಬಾರಿಗೆ ಬೆಂಗಳೂರಿನಿಂದಾಚೆಗೆ ನಡೆಸಲಿರುವ ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಬೀದರ್. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ನಾಗರಿಕರು ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸಬಹುದು.

ಇದಕ್ಕಾಗಿ ಅವರು ಗ್ರಾಮ ಒನ್, ಬಾಪೂಜಿ ಸೇವಾಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮುಂಚಿತವಾಗಿಯೇ ಪೂರಕ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿ. ಸ್ವೀಕೃತಿ ಪಡೆದುಕೊಂಡು ನೋಂದಾಯಿಸಿಕೊಳ್ಳಬಹುದು. ಹೀಗೆ ನೋಂದಾಯಿಸಿಕೊಂಡವರು ಕಲಬುರಗಿಯಲ್ಲಿ ತಮ್ಮ ಅಹವಾಲಿನ ಸ್ವೀಕೃತಿ ಪತ್ರದೊಂದಿಗೆ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆಗೆ ಪರಿಹಾರ ಪಡೆಯಬಹುದಾಗಿದೆ.

ಒಂದು ವೇಳೆ ಕಾರಣಾಂತರಗಳಿಂದ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ, ನೇರವಾಗಿ ಕಾರ್ಯಕ್ರಮ ನಡೆಯು ದಿನ ಸ್ಥಳದಲ್ಲಿಯೇ ನಿಗದಿತ ಕೌಂಟರುಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಜನಸ್ಪಂದನ ಕಾರ್ಯಕ್ರಮದ ಪ್ರಯೋಜನವನ್ನು ಕಲಬುರಗಿ ವಿಭಾಗದ ನಾಗರೀಕರು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";