ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ 2020-21 ನೇ ಸಾಲಿನಲ್ಲಿ ಹೊಸದಾಗಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್‍ಸ್ ಕಾಲೇಜುಗಳಿಗೆ ಮೂಲ ಸೌಕರ್ಯಗಳಿಲ್ಲದಿದ್ದರೂ ಅನುಮತಿ ನೀಡಿ ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಅವರು ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕುರಿತು ಪರಿಶೀಲಿಸಲು ಎನ್. ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ
ರಚಿಸಲಾಗಿರುವ ವಿಶೇಷ ಜಂಟಿ ಸದನ ಸಮಿತಿಯು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಗೆ ಶಾಸಕರ ಭವನ ಕಟ್ಟಡ – 5 ರ ಮೂರನೇ ಮಹಡಿಯಲ್ಲಿರುವ ಸಮ್ಮೇಳನಾ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ತಿನ ಉಪ ಕಾರ್ಯದರ್ಶಿ ಹೆಚ್. ಮಲ್ಲೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.