ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ / ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್, ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಜಿಮ್/ ಫಿಟ್ನೆಸ್ ತರಬೇತಿಯು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆ 15 ದಿನಗಳ ಅವಧಿಯಾಗಿರುತ್ತದೆ. ತರಬೇತಿ ಪಡೆಯಲಿಚ್ಚಿಸುವವರು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಬ್ಯೂಟಿಷಿಯನ್ ತರಬೇತಿಯು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ, 13 ದಿನಗಳ ಅವಧಿಯಾಗಿರುತ್ತದೆ ಹಾಗೂ ಚಾಟ್ಸ್ ತಯಾರಿಕೆ ತರಬೇತಿಯು ಅಕ್ಟೋಬರ್ 4 ರಿಂದ 9 ರವರೆಗೆ 06 ದಿನಗಳ ಅವಧಿಯಾಗಿರುತ್ತದೆ. ತರಬೇತಿ ಪಡೆಯಲಿಚ್ಚಿಸುವವರು ಎಸ್ಎಸ್ಎಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾಗಿರುವವರು ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಟ 40 ವರ್ಷದೊಳಗಿರಬೇಕು. ತರಬೇತಿಯು ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ 5.30 ಗಂಟೆಯವರೆಗೆ ನಡೆಯಲಿದ್ದು, ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ / ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಶಿಬಿರಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಅಲ್ಲದೇ ಹೊರ ಜಿಲ್ಲೆಗಳಿಂದ ಆಗಮಿಸುವ ಶಿಭಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಆಸಕ್ತ ಯುವಕ / ಯುವತಿಯರು ತಮ್ಮ ಜನ್ಮ ದಿನಾಂಕದ ದಾಖಲೆಯೊಂದಿಗೆ ಸಹಾಯವಾಣಿ ಸಂಖ್ಯೆ 155265 ಹಾಗೂ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಯುವ ಕೇಂದ್ರ ನೃಪತುಂಗ ರಸ್ತೆ ಬೆಂಗಳೂರು –560001 ಗೆ ಅಥವಾ ಮೊಬೈಲ್ ದೂರವಾಣಿ ಸಂಖ್ಯೆ 9731251411 ಇಲ್ಲಿ ನೋಂದಾಯಿಸಿಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಸ್ಸಿಎಸ್ಪಿ / ಟಿಎಸ್ಪಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.