ಖಾಸಗಿ ಶಾಲಾ ಆಡಳಿತ ಮಂಡಳಿ ಮಾನ್ಯತೆಗೆ ಅವಕಾಶ
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳ ೨೦೨೪-೨೫ನೇ ಸಾಲಿಗಾಗಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವು ೨೦೧೭-೧೮ರ ಪೂರ್ವದಲ್ಲಿ ನೋಂದಣಿ ಪಡೆದು ನಡೆಸಲಾಗುತ್ತಿರುವ ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ತುಮಕೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.