ರಾಹುಲ್ ಗಾಂಧಿ ದೇಶ ವಿರೋಧಿ, ಮೀಸಲಾತಿ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ-ಅಮಿತ್ ಶಾ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಅಮೆರಿಕದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿಗೆ ತಮ್ಮ ವಿದೇಶಿ ಭೇಟಿಯ ಸಂದರ್ಭದಲ್ಲಿ ದೇಶ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಕಿಡಿ ಕಾರಿದ್ದಾರೆ.ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೇಶ ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಮತ್ತು ದೇಶ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿದೆ.

ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ದೇಶವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರುವುದಿರಲಿ ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದಿರಲಿ. ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.

ಪ್ರಾದೇಶಿಕತೆ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಯನ್ನು ಪ್ರಚೋದಿಸುವ ಹೇಳಿಕೆಗಳನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಮಾಡುತ್ತಿದ್ದು ಆ ಪಕ್ಷದ ತಂತ್ರವನ್ನು ಬಹಿರಂಗಪಡಿಸುತ್ತದೆ ಎಂದು ಅಮಿತ್ ಶಾ ವಾಗ್ದಾಳಿ ಮಾಡಿದ್ದಾರೆ.ದೇಶದಲ್ಲಿನ ಮೀಸಲಾತಿ ರದ್ದತಿಯನ್ನು ರಾಹುಲ್ ಗಾಂಧಿ ಪ್ರತಿಪಾದಿಸುವ ಮೂಲಕ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವವರೆಗೂ ಯಾರೂ ಮೀಸಲಾತಿ ರದ್ದುಗೊಳಿಸಲು ಸಾಧ್ಯವಿಲ್ಲ. ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಗೆ ನಾನು ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";