ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಚಾಲನೆ 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ನಗರದ ಎಪಿಎಸ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಿಂದ ಜಂಟಿಯಾಗಿ ಎನ್.ಆರ್. ಕಾಲೊನಿಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ಕ್ರೀಡಾ ಕೂಟ ಆಯೋಜಿಸಲಾಗಿದೆ. 

ಪಠ್ಯದ ಜೊತೆಗೆ ಪಠ್ಯೇತರ ಚುವಟಿಕೆ, ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾಕೂಟ ನಡೆಸುತ್ತಿದ್ದು. ಕ್ರೀಡೆಯತ್ತ ಶಿಕ್ಷಣ ಸಂಸ್ಥೆಗಳನ್ನು ಸೆಳೆಯಲು ಈ ಕ್ರೀಡಾಕೂಟ ಏರ್ಪಡಿಸಲಾಗಿದೆ. 

ಎ.ಪಿ.ಎಸ್‌ಶಿಕ್ಷಣ ಸಂಸ್ಥೆಯ ಅಧ್ಯಕ್ಷ  ಡಾ.ವಿಷ್ಣುಭರತ್‌ಆಲಂಪಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪ.ಪೂ)  ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರಾದ ಮನೋಜಕುಮಾರ್‌ಕೊಳ್ಳ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. 

ಮನೋಜಕುಮಾರ್‌ಕೊಳ್ಳ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು, ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾತೊಡಗಿಸಿಕೊಳ್ಳಬೇಕು ಎಂದರು. 

ಡಾ.ವಿಷ್ಣು ಭರತ್‌ಆಲಂಪಲ್ಲಿ ಮಾತನಾಡಿ, ವಿದ್ಯಾರ್ಥಿಗಳು ದೇಹವನ್ನು ದಂಡಿಸಿ, ದೈಹಿಕವಾಗಿ ಸದೃಡರಾಗಲು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂ.ದಕ್ಷಿಣ ಕ್ರೀಡಾ ಸಂಚಾಲಕ ಮುನಿರಾಜು ಹಾಗೂ ಸಹ ಕ್ರೀಡಾ ಸಂಚಾಲಕ ಎ.ಅನಂದಕುಮಾರ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ತಿಮ್ಮಯ್ಯ, ಎ.ಪಿ.ಎಸ್‌ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಟಿ.ವಿ.ಗುರುದೇವಯ್ಯ ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";