ಬಿಜೆಪಿ ನಗರ ಎಸ್. ಸಿ ಮೋರ್ಚಾ ಉಪಾಧ್ಯಕ್ಷರಾಗಿ ಶಂಕರ್ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ನಗರ ಮಂಡಲದ ಎಸ್.ಸಿ ಮೋರ್ಚಾ ಉಪಾಧ್ಯಕ್ಷರನ್ನಾಗಿ ಶಂಕರ್ ರವರನ್ನು ಆಯ್ಕೆ ಮಾಡಲಾಗಿದೆ. 

  ದೊಡ್ಡಬಳ್ಳಾಪುರ ನಗರದ ಬಿಜೆಪಿ ಕಛೇರಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಮುದ್ದಪ್ಪ ಮಾತನಾಡಿ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವ ಮೂಲಕ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ನೂತನ ಪದಾಧಿಕಾರಿಗಳು ಶ್ರಮಿಸಬೇಕೆಂದು ತಿಳಿಸಿದರು.

 ಯುವ ಮುಖಂಡ ಶಂಕರ್ ಮಾತನಾಡಿ ಪಕ್ಷವು ನನ್ನನ್ನು ಗುರುತಿಸಿ ಉತ್ತಮ ಜವಾಬ್ದಾರಿಯನ್ನು ನೀಡಿದೆ. ಈ ಜವಾಬ್ದಾರಿಯನ್ನು ನೀಡಿದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿಷ್ಠೆಯಿಂದ ಪಕ್ಷದಲ್ಲಿ ದುಡಿದು ನಗರ ಹಾಗೂ ತಾಲೂಕಿನಾದ್ಯಂತ ಪಕ್ಷ ಸಂಘಟನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಶಕ್ತಿ ತುಂಬಲಾಗುವುದು ಎಂದರು.

 ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ತಾಲೂಕು ಘಟಕದ ಪದಾಧಿಕಾರಿಗಳು, ನಗರ ಘಟಕದ ಪದಾಧಿಕಾರಿಗಳು, ಮುಖಂಡರು ಸದಸ್ಯರು ಉಪಸ್ಥಿತರಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";