ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಏರ್ಪಡಿಸಲಾಗುವ 145 ಕಿ.ಮೀ. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸರ್ಕಾರಿ ನೌಕರರು ಪಾಲ್ಗೊಳ್ಳುವುದನ್ನು ಕಡ್ಡಾಯಗೊಳಿಸಿದ್ದು, ಗೈರು ಹಾಜರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಸೂಚನೆ ನೀಡಿದ್ದಾರೆ.
ಮಾನವ ಸರಪಳಿ ಸೆ. 15 ರಂದು ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕಿನಲ್ಲಿ ನಿರ್ಮಿಸಲಾಗುವ ಕಾರ್ಯಕ್ರಮವಿದ್ದು, ಈ ತಾಲ್ಲೂಕುಗಳ ಸರ್ಕಾರಿ ನೌಕರರ ಜೊತೆಗೆ, ಇತರೆ ತಾಲ್ಲೂಕುಗಳಾದ ಹೊಳಲ್ಕೆರೆ, ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕುಗಳ ಎಲ್ಲ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು ಮಾನವ ಸರಪಳಿ ನಿರ್ಮಾಣದಲ್ಲಿ ಪಾಲ್ಗೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೆ ಆಯಾ ತಾಲ್ಲೂಕುವಾರು ಸಮಗ್ರ ಮೇಲ್ವಿಚಾರಣಾ ನೋಡಲ್ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳನ್ನು ಮಾನವ ಸಂಪನ್ಮೂಲ ಒದಗಿಸುವ ಇಲಾಖೆ ಹಾಗೂ ಅಧಿಕಾರಿಗಳನ್ನು ಕೂಡ ನಿಯೋಜಿಸಲಾಗಿದೆ.
ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ವರ್ಗದವರನ್ನು ಒಳಗೊಂಡಂತೆ ತಮ್ಮ ತಮ್ಮ ವಾಹನಗಳೊಂದಿಗೆ ತಾಲ್ಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಕಾರ್ಯಕ್ರಮ ಹಾಜರಾದ ಕುರಿತು ಜಿಪಿಎಸ್ ಛಾಯಾಚಿತ್ರದೊಂದಿಗೆ ವರದಿಯನ್ನು ಸಲ್ಲಿಸಬೇಕು. ಗೈರು ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ. ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕುಗಳ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಿ ಜಿಪಿಎಸ್ ಛಾಯಾಚಿತ್ರ ಸಹಿತ ವರದಿ ಸಲ್ಲಿಸಬೇಕು.
ಚಿತ್ರದುರ್ಗ ತಾಲ್ಲೂಕಿನ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳನ್ನು ಮೊಳಕಾಲ್ಮೂರು ತಾಲ್ಲೂಕಿಗೆ ಮಾನವ ಸರಪಳಿ ನಿರ್ಮಾಣಕ್ಕೆ ನಿಯೋಜಿಸಿದ್ದು, ಇದಕ್ಕೆ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್-8105934489, ಉಪಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ-9449088064 ಹಾಗೂ ಜಂಟಿಕೃಷಿ ನಿರ್ದೇಶಕ ಮಂಜುನಾಥ್-8277930950 ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಹೊಸದುರ್ಗ ತಾಲ್ಲೂಕಿನ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳನ್ನು ಹಿರಿಯೂರು ತಾಲ್ಲೂಕಿನಲ್ಲಿ ಮಾನವ ಸರಪಳಿ ನಿರ್ಮಾಣಕ್ಕೆ ನಿಯೋಜಿಸಿದ್ದು, ವಿಶೇಷ ಭೂಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯ್ಕ್-99801939421, ಡಿಯುಡಿಸಿ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್-9448147390 ಹಾಗೂ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಮಧು-9480861003 ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳನ್ನು ಚಳ್ಳಕೆರೆ ತಾಲ್ಲೂಕಿನಲ್ಲಿ ಮಾನವ ಸರಪಳಿ ನಿರ್ಮಾಣಕ್ಕೆ ನಿಯೋಜಿಸಿದ್ದು, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ-9480861001, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿನಿರ್ದೇಶಕ ಆನಂದ್-9448004858, ಆಹಾರ ಇಲಾಖೆ ಜಂಟಿನಿರ್ದೇಶಕ ಮಧುಸೂಧನ್-9448233477 ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಸಂಬಂಧಪಟ್ಟ ತಾಲ್ಲೂಕುಗಳ ಇಲಾಖಾ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, ತಪ್ಪದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.