Crime News ಶಾಸಕ ಮುನಿರತ್ನ ಅವರ ಬಾಯಿಯನ್ನು ಯಾವಗ ಶುದ್ಧ ಮಾಡುತ್ತಿರಾ- CM Last updated: September 20, 2024 1:51 AM News Desk Share SHARE ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಿಜೆಪಿಯವರು ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವರು ಶಾಸಕ ಮುನಿರತ್ನ ಅವರ ಬಾಯಿಯನ್ನು ಯಾವಗ ಶುದ್ಧ ಮಾಡುತ್ತಿರಾ, ಊರಿಗೆ ಬುದ್ದಿ ಹೇಳುವ ಮೊದಲು ನಿಮ್ಮವರಿಗೆ ಬುದ್ದಿ ಹೇಳಿ ಎಂದು ಮುನಿರತ್ನ ಪ್ರಕರಣಕ್ಕೆ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಕಿಡಿಕಾರಿದ್ದಾರೆ. ನಾಯಕರಲ್ಲಿ ದ್ವೇಷ- ಅಕ್ರಮವಾಗಿ ಪಡಿತರ ಸಾಗಿಸಲು ಯತ್ನಿಸಿದ ಲಾರಿ ವಶಕ್ಕೆ ನೀಡಿದ ಕರವೇ ಕಾರ್ಯಕರ್ತರು ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯವನ್ನು ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತವಾಗಿಸಿಕೊಂಡಿದ್ಧಾರೆ. ಚುನಾವಣೆ ಮುಗಿದರೆ ಬಿಜೆಪಿಯವರು ಈ ನಾಡಿನ ದಲಿತರು, ಶೋಷಿತರನ್ನು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣುವುದಿಲ್ಲ. ತಳ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಶಾಸಕ ಮುನಿರತ್ನ ಅವರ ಬಾಯಿಂದ ಬಂದ್ದಂತಹ ಮಾತುಗಳೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಶ್ಲೀಲವಾಗಿ ನಿಂದನೆ- ವೈರಲ್‌ಆಗಿರುವ ಆಡಿಯೋದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯದವರನ್ನು ಅತ್ಯಂತ ಅಶ್ಲೀಲವಾಗಿ ನಿಂದಿಸಿದ್ದಾರೆ. ಗುತ್ತಿಗೆದಾರ ಚಲುವರಾಜು ಅವರ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳೆಲ್ಲವು ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿದೆ.ಬಿಜೆಪಿಯದ್ದು 40% ಕಮಿಷನ್‌ಸರ್ಕಾರ ಹರಿಯಬ್ಬೆ ಪ್ರಗತಿ ಗ್ರಾಮೀಣ ಬ್ಯಾಂಕ್ ದರೋಡೆಗೆ ವಿಫಲ ಯತ್ನ ಬಿಜೆಪಿಯ 40% ಕಮಿಷನ್‌ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ.ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಅವರ ಕುರಿತು ಮಾತನಾಡುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಶಾಸಕ ಮುನಿರತ್ನ ಅವರ ಹೇಳಿಕೆಯನ್ನು ಬೆಂಬಲಿಸಿ ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಅಥಾವ ರಾಜ್ಯದ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಟಾಂಗ್ ಕೊಟ್ಟಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಉಚ್ಛಾಟನೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧನ Share This Article Facebook Twitter Whatsapp Whatsapp Telegram Copy Link