ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ ಯೋಧರು

News Desk

ಚಂದ್ರವಳ್ಳಿ ನ್ಯೂಸ್, ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.

 ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಶುಕ್ರವಾರ ತಡರಾತ್ರಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ಅದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಮತ್ತಿಬ್ಬರು ಗಾಯಗೊಂಡಿದ್ದರು.

ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಶನಿವಾರ ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 ಯೋಧರು ಶುಕ್ರವಾರ ರಾತ್ರಿಯಿಂದಲೇ ಪ್ರದೇಶವನ್ನು ಸುತ್ತುವರಿದು ಶನಿವಾರ ನಸುಕಿನ ಜಾವ ಏರ್ಪಟ್ಟ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";