ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

News Desk

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ದೇವಾಲಯ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಪರಿಶಿಷ್ಟ ಸಮುದಾಯದ (ಎಸ್‌ಸಿ) ಯುವಕನ್ನು ಪ್ರಬಲ ಜಾತಿ ಗುಂಪು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದೂ ಅಲ್ಲದೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಗ್ರಾಮದ 21 ಜನರ ವಿರುದ್ಧ ಎಫ್‌ಐಆರ್ಮ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಶನಿವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಮಾದರ ಎಂಬ 28 ವರ್ಷದ ಯುವಕ ಥಳಿತಕ್ಕೊಳಗಾಗಿದ್ದು, ಈ ಸಂಬಂಧ ಮುದ್ದಿನಗೌಡ ದ್ಯಾಮನಗೌಡ ಸತ್ಯನ್ನವರ, ಮಂಜುನಾಥ ಲೆಂಕೇಶ ಮೂಲಿಮನಿ, ತುಳಸಿಗೇರಪ್ಪ ಕಾಮಪ್ಪ ತಳವಾರ ಸೇರಿದಂತೆ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಸೆ.10ರಂದು ಅರ್ಜುನ್, ತನ್ನದೇ ಗ್ರಾಮದ ದ್ಯಾಮವ್ವ ಗುಡಿಯ ಒಳಗೆ ಹೋಗಿ ದೇವರಿಗೆ ನಮಸ್ಕಾರ ಮಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಪ್ರಬಲ ಜಾತಿ ಗುಂಪು, “ನೀನು ದಲಿತ ಸಮುದಾಯದವನು. ಗುಡಿಯ ಒಳಗೆ ಹೋಗಿ ನಮಸ್ಕಾರ ಮಾಡಿದ್ದು ಯಾಕೆ” ಎಂದು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಾಲದ್ದಕ್ಕೆ, ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

“20ಕ್ಕೂ ಅಧಿಕ ಜನರು ಸೇರಿ ಆತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ 21 ಆರೋಪಿಗಳ ವಿರುದ್ದ ಪ್ರಕರಣ ಕೇಸ್ ದಾಖಲಿಸಿದ್ದಾರೆ. ಘಟನೆ ನಂತರ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";