ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯ ಕೀ ಉತ್ತರಗಳು ಆಯೋಗದ ಜಾಲತಾಣದಲ್ಲಿ ಲಭ್ಯ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಪಿ.ಎಸ.ಸಿ 509ಇ(1)/2023-24 ದಿನಾಂಕ: 26-02-2024ರಲ್ಲಿ ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಮತೆ ಆಗಸ್ಟ್ 27ರಂದು ನಡೆಸಿದ ಪೂರ್ವಭಾವಿ ಪರೀಕ್ಷೆಯ ಪತ್ರಿಕೆ –1 (ವಿಷಯ ಸಂಕೇತ – 578) ಮತ್ತು ಪತ್ರಿಕೆ – 2 (ವಿಷಯ ಸಂಕೇತ – 579)ರ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಅಭ್ಯಥಿಗಳು ಸಮದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆಗಳನ್ನು ಹಾಗೂ ನಮೂನೆಯ ಮಾದರಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಸೂಚನೆಗಳನ್ವಯ ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು.
ಆಕ್ಷೇಪಣೆಗಳನ್ನು ಸೆಪ್ಟೆಂಬರ್ 04 ರ ಸಂಜೆ 5.30 ಗಂಟೆಯೊಳಗೆ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 560 001 ಇವರಿಗೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು. ಅವಧಿಯ ನಂತರ ಸ್ವೀಕರಿಸಲಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಆಯೋಗವು ಜವಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.