ಪಕ್ಷ ವಿರೋಧಿ ಚಟುವಟಿಕೆ 4 ಮಂದಿ ನಗರಸಭಾ ಸದಸ್ಯರ ಅಮಾನತು
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ಅ.೨೬ ರಂದು ನಡೆದ ಚಿತ್ರದುರ್ಗ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಉಪಾಧ್ಯಕ್ಷರು ಸೇರಿದಂತೆ ೩ ಜನ ನಗರಸಭಾ ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ೬ ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿತ್ರದುರ್ಗ ನಗರಸಭೆಯ ಅಧ್ಯಕ್ಷ, ಉಪಾದ್ಯಕ್ಷ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಮತ ಚಲಾವಣೆ ಮಾಡಿದ್ದು ಪಕ್ಷ ವಿಪ್ ನೀಡಿತ್ತು. ವಿಪ್ ಉಲ್ಲಂಘನೆ ಮಾಡಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ
ವಾರ್ಡ್ ನಂ 1ರ ನಾಗಮ್ಮ, 17ರ ಜಯಪ್ಪ, 3೦ರ ಮಂಜಣ್ಣ ಹಾಗೂ 33 ನೇ ವಾರ್ಡನ ಶ್ರೀದೇವಿ ಚಕ್ರವರ್ತಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.