ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಸೆಪ್ಟಂಬರ್ 20ರಂದು ಜರುಗುವ ವಿಶ್ವ ಸಾಧಕರ ಶೃಂಗಸಭೆಯಲ್ಲಿ ಪಾಲ್ಗೊಂಡು ಉದ್ಘಾಟಿಸಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಸಚಿವೆ, ನಟಿ ಡಾ.ಜಯಮಾಲ ಹಾಗೂ ನಟಿ ಸೌಂದರ್ಯ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಮಾಲ್ಡೀವ್ಸ್ ದೇಶದ ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.