ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಯ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರ ಅಧ್ಯಕ್ಷತೆಯ ಸಮಿತಿಯ ರಾಜ್ಯ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಿದೆ. ವಿಕಲಚೇತನರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು, ಸಂಸ್ಥೆಗಳು, ಸಾಧನೆಗೈದ ವಿಕಲಚೇತರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು www.dwdsc.kar.nic.in ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅ.15 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನದ ಆವರಣದಲ್ಲಿನ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-235284 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.