ರಾಜಧಾನಿ ಬೆಂಗಳೂರು ರಾಮಯ್ಯ ಆಸ್ಪತ್ರೆಗೆ ಬೆಂಕಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಎಂಎಸ್‌ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.

ಆರ್‌ಎಂವಿ ಲೇಔಟ್‌ಬಳಿ ಇರುವ ರಾಮಯ್ಯ ಆಸ್ಪತ್ರೆಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ಎರಡನೇ ಅಂತಸ್ಥಿನಲ್ಲಿರುವ ಕಾರ್ಡಿಯಕ್‌ಎಸಿ ವಾರ್ಡ್‌ನಲ್ಲಿ ವಿದ್ಯುತ್‌ಶಾರ್ಟ್‌ಸರ್ಕ್ಯೂಟ್‌ಆಗಿ ಬಳಿಕ ಇತರೆ ವಾರ್ಡ್‌ಗಳಿಗೆ ಬೆಂಕಿ ಹರಡಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಬೆಂಕಿ, ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆ ಒಳಗಿದ್ದ ರೋಗಿಗಳು, ಅವರ ಸಂಬಂಧಿಕರು, ಸಿಬ್ಬಂದಿಗಳು ದಿಕ್ಕಾಪಾಲಾಗಿ ಓಡಿ ಹೊರಗಡೆ ಬಂದಿದ್ದಾರೆ. ಸಿಬ್ಬಂದಿಗೆ ಗಾಯಘಟನೆಯಲ್ಲಿ ಆಸ್ಪತ್ರೆಗೆ 7-8 ನರ್ಸ್‌ಗಳಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಆ ನರ್ಸ್‌ಗಳು ಬೆಂಕಿ ಕಾಣಿಸಿಕೊಂಡ ಕೂಡಲೇ ರೋಗಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ರೋಗಿಗಳಿಗೆ ಸಮಸ್ಯೆಯಾಗಿಲ್ಲಅಗ್ನಿಶಾಮಕ ಇಲಾಖೆ ಬಂದು ಅಗತ್ಯ ಕ್ರಮಕೈಕೊಂಡಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";