ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಎಲೆಕ್ಟ್ರಾನಿಕ್ ಮಾಧ್ಯಮದ ಕುರಿತು ಬೆಂಗಳೂರಿನಲ್ಲಿ ವಸತಿ ಸಹಿತ ಎರಡು ತಿಂಗಳ ಉಚಿತ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 25 ಸಂಜೆ 5.00 ಗಂಟೆ ಒಳಗಾಗಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಕೇಂದ್ರ ಹಾಗೂ ವಲಯ ಕಛೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯ ಸಮಿತಿಯಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.