ಗ್ರೂಪ್-‘ಎ’ ಸಹಾಯಕ ನಿಯಂತ್ರಕರ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಸಂಖ್ಯೆ ಪಿ ಎಸ್ ಸಿ 516,   (1)/(ಹೆಚ್.ಕೆ)/2023-24 ದಿನಾಂಕ 01-03-2024ರಂದು ಅಧಿಸೂಚಿಸಲಾದ

 ಕರ್ನಾಟಕ ರಾಜ್ಯ  ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹೈದ್ರಾಬಾದ್ಕರ್ನಾಟಕ ವೃಂದದ15 ಗ್ರೂಪ್ಸಹಾಯಕ ನಿಯಂತ್ರಕರ ಹುದ್ದೆಗಳ ನೇಮಕಾತಿಗೆ ದಿನಾಂಕ:28-07-2024ರಂದು ನಡೆಸಲಾದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ

ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ:20-09-2024ರಂದು ಆಯೋಗದ ವೆಬ್ಸೈಟ್ http://kpsc.kar.nic.in/list/eligibility  ನಲ್ಲಿ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಮುಖ್ಯ ಪರೀಕ್ಷೆಗೆ  ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಕುರಿತು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";