ಕುಡಿದು ಅಂಬ್ಯುಲೆನ್ಸ್ ಚಾಲನೆ: ಬಾಣಂತಿ, ಮಗುವಿಗೆ ಗಾಯ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ.

ಶನಿವಾರ ರಾತ್ರಿ ರಿಪ್ಪನ್ ಪೇಟೆ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.  

ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು ನಗುಮಗು ಆಂಬುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗುತಿತ್ತು ಆದರೆ ಆಂಬುಲೆನ್ಸ್ ಚಾಲಕ ಬಾಲಚಂದ್ರ ಎಂಬಾತನು ಪಾನಮತ್ತನಾಗಿ ವಾಹನ ಚಲಾಯಿಸಿದ್ದರಿಂದ ದೂನ ಸಮೀಪದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ತಾಯಿ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ. 

ಇದೇ ಸಮಯಕ್ಕೆ ಸರಿಯಾಗಿ ಮತ್ತೊಂದು 108 ಆಂಬುಲೆನ್ಸ್ ಈ ಮಾರ್ಗವಾಗಿ ಬಂದಿದ್ದು ಗಾಯಾಳುಗಳನ್ನು 108 ಆಂಬುಲೆನ್ಸ್ ಗೆ ಶಿಫ್ಟ್ ಮಾಡಲು ಹೊರಟಾಗ ಕುಟುಂಬಸ್ಥರು ಆಂಬುಲೆನ್ಸ್ ಸಹವಾಸವೇ ಬೇಡಎಂದು ಖಾಸಗಿ ಕಾರಿನಲ್ಲಿ ತಾಯಿ ಮಗುವನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಿದ್ದಾರೆ. 

ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಪಾನಮತ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";