ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸ್ಪಷ್ಟೀಕರಣ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ಸೆ.20 ರಂದು ಸಂಸದ ಗೋವಿಂದ ಕಾರಜೋಳ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಗೈರು ಹಾಜರಿಯಾಗಿದ್ದರು ಎಂದು ಕೆಲ ದಿನಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿರುತ್ತದೆ.

ಆದರೆ ಕೆ.ಎಂ.ಇ.ಆರ್.ಸಿ ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅವರ ಅಧ್ಯಕ್ಷೆಯಲ್ಲಿ ಸೆ.20 ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಜರುಗಿದ ಗಣಿಬಾಧಿತ ಜಿಲ್ಲೆಗಳಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಸಿಇಪಿಎಂಐಝಡ್ ಸಭೆಯಲ್ಲಿ ಭಾಗವಹಿಸಲು, ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಸಭೆಗೆ ಹಾಜರಾಗಲಾಗಿತ್ತು.

 ಅದೇ ದಿನದಂದು ಸಂಸದರಾದ ಗೋವಿಂದ ಕಾರಜೋಳ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿರುತ್ತಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವಿಂದ್ರ.ಎಸ್.ಪಿ ಸ್ಪಷ್ಟೀಕರಣ ನೀಡಿದ್ದಾರೆ.  

ಡಾ.ರವಿಂದ್ರ.ಎಸ್.ಪಿ ಅನುಪಸ್ಥಿತಿಯಲ್ಲಿ ಸೆ.20 ರಂದು ನಿವಾಸಿ ವೈದ್ಯಾಧಿಕಾರಿ ಡಾ.ಜಿ.ಆನಂದ್ ಪ್ರಕಾಶ್ ಜಿಲ್ಲಾ ಆಸ್ಪತ್ರೆಯ ದೈನಂದಿನ ಕರ್ತವ್ಯ  ನಿರ್ವಹಿಸಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಸ್ಪಷ್ಟಪಡಿಸಿದ್ದಾರೆ. 

- Advertisement -  - Advertisement -  - Advertisement - 
Share This Article
error: Content is protected !!
";