ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2024 ರ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಸೆಪ್ಟೆಂಬರ್ 23 ರಂದು ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿ ಯಶಸ್ವಿಯಾಗಿ ನೆರವೇರಿಸಲಾಗಿರುತ್ತದೆ.
ಈ ಕ್ರೀಡಾಕೂಟದಲ್ಲಿ ವಿಜೇತರಾದ 60-70 ವರ್ಷದ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಮತ್ತು 60-69 ವರ್ಷದ ಪುರುಷರಿಗೆ ಬಿರುಸಿನ ನಡಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಶ್ರೀಮತಿ ವಿಜಯ.ಎಸ್.ಜಿ. ಮಂಡ್ಯ ಜಿಲ್ಲೆ ಪಿ.ಎನ್.ಅಂಬಿಕಾ ಮಹೇಶ್ವರ,
ತುಮಕೂರು ಜಿಲ್ಲೆ ಮತ್ತು ಟಿ.ವಿ ಕೌಸಲ್ಯಬಾಯಿ, ರಾಮನಗರ ಜಿಲ್ಲೆ ಇವರುಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ವಿಠಲ ಶೆಟ್ಟಿಗಾರ್ ಬಿನ್ ಮಂಜುನಾಥ್ ಶೆಟ್ಟಿಗಾರ್, ಉಡುಪಿ ಜಿಲ್ಲೆ ಅಗಜಾನನ ಮೂರ್ತಿ, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಅಬ್ದುಲ್ ಹಲೀಂ, ದಕ್ಷಿಣ ಕನ್ನಡ ಜಿಲ್ಲೆ ಇವರುಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ.
ರಾಜ್ಯ ಮಟ್ಟದ ಕ್ರೀಡೆಯಲ್ಲಿ ವಿಜೇತರಾದವರಿಗೆ ಅಕ್ಟೋಬರ್ 1 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದ ದಿನ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.