ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಆಧಾರ್ ಲಿಂಕ್ ಮಾಡಲು ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2022-23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಅವರ ಆಧಾರ್ ಸಂಖ್ಯೆ ಲಿಂಕ್ ಆಗದ ಕಾರಣ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ,

ಸದರಿ ಫಲಾನುಭವಿಗಳ ಪಟ್ಟಿಯನ್ನು ಮಂಡಳಿಯ ವೆಬ್ಸೈಟ್  https://karbwwb.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಸದರಿ ಫಲಾನುಭವಿಗಳು ಅಕ್ಟೋಬರ್ 15ರೊಳಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡಬೇಕು.

2022-23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಮಕ್ಕಳ SATS ID/STUDENT ID ನಮೂದಾಗದ ಕಾರಣ ಸದರಿ ಅರ್ಜಿಗಳಿಗೆ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಸದರಿ ಫಲಾನುಭವಿಗಳ ಪಟ್ಟಿಯನ್ನು ಮಂಡಳಿಯ ವೆಬ್ಸೈಟ್ https://karbwwb.karnataka.gov.in ನಲ್ಲಿ ಪ್ರಕಟಿಸಲಾಗಿದ್ದು,

ಸದರಿ ಫಲಾನುಭವಿಗಳು ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಛೇರಿಗಳಿಗೆ ತೆರಳಿ ಶೈಕ್ಷಣಿಕ ಧನಸಹಾಯ ಕೋರಲಾದ ಮಕ್ಕಳ SATS ID/STUDENT ID  ಅನ್ನು ಅಕ್ಟೋಬರ್ 15 ರೊಳಗೆ ಅಪ್ಡೇಟ್ ಮಾಡುವಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";