ಉತ್ತಮ ಶ್ವಾಸಕೋಶಗಳಿಗೆ ಜೀವನ ಶೈಲಿ ಬದಲಾವಣೆ ಅಗತ್ಯ- ಡಾ.ಬಿ.ವಿ.ಗಿರೀಶ್

oplus_131074
News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯಕರ ಶ್ವಾಸಕೋಶಗಳಿಗೆ ಉತ್ತಮ ಅಭ್ಯಾಸಗಳ ಮೂಲಕ ನಿಮ್ಮ ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

 ಇಲ್ಲಿನ ಚೋಳಘಟ್ಟ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಕ್ಷಿಪ್ರ ನಿಘಾವಣಾ ತಂಡದ ಸದಸ್ಯರಿಗೆ, ಚುನಾಯಿತ ಪ್ರತಿನಿಧಿಗಳಿಗೆ, ಸಮನ್ವಯ ಇಲಾಖೆಗಳ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಗ್ರಾಮ ಆರೋಗ್ಯ ಯೋಜನೆ ತರಬೇತಿ ಕಾರ್ಯಾಗಾರ ಹಾಗೂ ವಿಶ್ವ ಶ್ವಾಸಕೋಶ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ವಾಸಕೋಶಗಳ ಆರೋಗ್ಯ ಕಾಪಾಡುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಶುದ್ಧವಾದ ಗಾಳಿಯನ್ನು ಸೇವಿಸಿ ಆರೋಗ್ಯಕರ ಶ್ವಾಸಕೋಶ ನಿಮ್ಮದಾಗಲಿ ಎಂದು ಹೇಳಿದರು.

 ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತಿ ಕ್ಷಿಪ್ರ ನಿಘಾವಣಾ ತಂಡ ಸಕ್ರಿಯವಾಗಿ ಭಾಗವಹಿಸಿ ಗ್ರಾಮ ಆರೋಗ್ಯ ಯೋಜನೆ ಅನುಷ್ಠಾನಗೊಳಿಸಬೇಕು. ಈ ತರಬೇತಿಯು ನಿಮ್ಮ ಜ್ಞಾನ ಕೌಶಲ್ಯ ಬಲ ಪಡಿಸಲಿದೆ ಎಂದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಗ್ರಾಮ ಪಂಚಾಯತಿ ಮಟ್ಟದ ನಿಘಾವಣ ತಂಡ ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ತಮ್ಮ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ, ಗ್ರಾಮ ಪಂಚಾಯತಿ ವೆಬ್ ಪೋರ್ಟಲ್‌ನಲ್ಲಿ ದತ್ತಾಂಶವನ್ನು ಇಂದನೀಕರಿಸಿ ಒಂದು ಗ್ರಾಮ ಪಂಚಾಯತಿ ಸ್ವಾಸ್ಥ್ಯನಕ್ಷೆ ರಚಿಸಿ ಎಂದರು.

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವಾಸವಿ ಅವರು ಬಾಲ್ಯ ವಿವಾಹ ತಡೆ ಕಾಯ್ದೆ ಗ್ರಾಮ ಪಂಚಾಯತಿ ಜವಾಬ್ದಾರಿ ಬಗ್ಗೆ ತಿಳಿಸಿದರು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೂಪ ಅವರು ಮಕ್ಕಳ ಹಕ್ಕು ಅಪೌಷ್ಟಿಕತೆ ಬಗ್ಗೆ ತಿಳಿಸಿದರು.

ಮಾನಸಿಕ ಆರೋಗ್ಯ ಸಮಾಲೋಚಕ ಡಾ.ಶ್ರೀಧರ್ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋಚೈತನ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕ್ಷಯರೋಗ, ರಕ್ತಹೀನತೆ ನಿಯಂತ್ರಣ ಕೀಟಜನ್ಯ ರೋಗಗಳ ನಿಯಂತ್ರಣದ ಬಗ್ಗೆ ತಿಳಿಸಿದರು. ತಾಲ್ಲೂಕು ಆಶಾ ಬೋಧಕಿ ತಬಿತ ಕಿಶೋರಿ ಆರೋಗ್ಯದ ಬಗ್ಗೆ ಮಾತನಾಡಿ, ಕಿಶೋರಿಯರಿಗೆ ಸಂಬAಧಿಸಿದ ಮುಟ್ಟಿನ ದೋಷದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು.

 ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಲಾ, ಸದಸ್ಯರಾದ ಸುರೇಶ್ ಉಗ್ರಾಣ್, ಚಂದ್ರಶೇಖರ, ಮಂಜುಳಾ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೂಪಕುಮಾರಿ, ಸಮುದಾಯ ಆರೋಗ್ಯಾಧಿಕಾರಿ ಪ್ರದೀಪ್, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳ ಇದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";