ಶೋಭಾಯಾತ್ರೆಯಲ್ಲಿ ಡಿಜೆ ನಾಸಿಕ್ ಬ್ಯಾಂಡ್ ಗಳಿಗೆ ನಿಷೇಧ

News Desk

ಚಂದ್ರವಳ್ಳಿ ನ್ಯೂಸ್, ಮಂಗಳೂರು:
102ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭವಾಗಲಿದ್ದು ಈ ಬಾರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾ ಯಾತ್ರೆಯಲ್ಲಿ D.J., ನಾಸಿಕ ಬ್ಯಾಂಡ್ ಗಳಿಗೆ ನಿಷೇಧ ಹೇರಿ ಶ್ರೀ ಶಾರದಾ ಮಹೋತ್ಸವ ಸಮಿತಿ ನಿರ್ಣಯ ಕೈಗೊಂಡಿದೆ.

ಮಂಗಳೂರು ಶ್ರೀ ವೆಂಕಟರಮಣ ದೇವಾಲಯದ ಆಚಾಯರ ಮಠ ವಠಾರದಲ್ಲಿರುವ ವಸಂತ ಮಂಟಪದಲ್ಲಿ 102ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ.

2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ತನುಮನ ಸಹಾಯ ನೀಡಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ಸಿಗೊಳಿಸುತ್ತಿದ್ದಾರೆ.

ಆಕ್ಟೋಬರ್ 8ರಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ರಾಜಾಂಗಣದಿಂದ ಶ್ರೀ ಉಮಾಮಹೇಶ್ವರ ದೇವಳ ರಸ್ತೆ , ರಾಮಮಂದಿರ , ನಂದಾ ದೀಪ ರಸ್ತೆ , ಹೂಮಾರುಕಟ್ಟೆ ರಸ್ತೆ , ರಥಬೀದಿಯಾಗಿ ಉತ್ಸವಸ್ಥಾನಕ್ಕೆ ತರಲಾಗುವುದು.

ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ನಡೆಯಲಿದೆ. ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಲಿದೆ . ಪ್ರತಿ ದಿನವೂ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಶ್ರೀ ಶಾರದಾ ಮಾತೆಯ ದರುಶನವನ್ನು ಪಡೆದುಕೊಳ್ಳಬಹುದು.

13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಗುವುದು. ಅಂದು ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ವಿಶೇಷ ದೀಪಾಲಂಕಾರ ಸೇವೆ ಜರಗಲಿದೆ.

ಆ.14ರಂದು ಸಂಜೆ 5 ಗಂಟೆಗೆ ಶ್ರೀ ಶಾರದಾ ಮಾತೆಗೆ ಪೂರ್ಣಾಲಂಕಾರ ನಡೆಯಲಿದೆ. ಅಂದು ರಾತ್ರಿ 8 ಗಂಟೆಗೆ ಶ್ರೀ ಶಾರದಾ ಮಾತೆಯ ವಿಸರ್ಜನೆಯ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಉತ್ಸವ ಸ್ಥಾನದಿಂದ ಹೊರಡುವ ಮರವಣಿಗೆ ಶ್ರೀ ಮಹಾಮಾಯಿ ದೇವಾಲಯವಾಗಿ, ಕೆನರಾ ಹೈಸ್ಕೂಲಿನ ಹಿಂಬದಿಯಿಂದ ಮಂಜೇಶ್ವರ ಗೋವಿಂದ ಪೈಯ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್ , ಬಸವನಗುಡಿ , ಚಾಮರಗಲ್ಲಿ , ರಥ ಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಸಮಾಪನಗೊಳ್ಳಲಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";