ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ಪಂಗಡದ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಅ.7ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್ಸೈಟ್ tw.kar.nic.in ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಗೆ ಅ.7ರ ಸಂಜೆ 5.30ರೊಳಗೆ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.