ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ತಮ್ಮ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ
, ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.

ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

 

- Advertisement -  - Advertisement - 
Share This Article
error: Content is protected !!
";