ವಾಣಿ ವಿಲಾಸ ಸಾಗರದ ಭಾನುವಾರದ ನೀರಿನ ಮಟ್ಟ ಎಷ್ಟು

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಭಾನುವಾರ 120.45 ಅಡಿಗೆ ಏರಿಕೆಯಾಗಿದೆ.

ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿ ದಿನ 550 ಕ್ಯೂಸೆಕ್ ನೀರನ್ನು ತರೀಕೆರೆ ಸಮೀಪದ ಬೆಟ್ಟದ ತಾವರೆಕೆರೆಯ ಪಂಪ್ ಹೌಸ್ ನಿಂದ ಒಂದು ಪಂಪ್ ಲಿಫ್ಟ್ ಮಾಡಲಾಗುತ್ತಿದೆ.

ಹಾಗಾಗಿ ನೀರಿನ ಒಳಹರಿವು 550 ಕ್ಯೂಸೆಕ್ ಇದ್ದು ಇಷ್ಟು ನೀರು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 120.45 ಅಡಿಗೆ ಏರಿಕೆಯಾಗಿದೆ.

ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಹರಿಯಲಿದೆ. ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.

- Advertisement -  - Advertisement -  - Advertisement - 
Share This Article
error: Content is protected !!
";